ಹೊಸದಿಗಂತ ವರದಿ ಬಳ್ಳಾರಿ:
ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳ ತಂಡ ಬಳ್ಳಾರಿಗೆ ಆಗಮಿಸಿದ್ದು, ಎಲ್ಲ ಆಯಾಮಗಳಿಂದ ತನಿಖೆ ಶುರು ಮಾಡಿದೆ.
ಪೋಲೀಸ್ ಅಧಿಕಾರಿಗಳಿಂದ ಘಟನೆಗೆ ಸಂಬಂಧಿಸಿದ ಕಡತಗಳನ್ನು ಪಡೆದ ಅಧಿಕಾರಿಗಳ ತಂಡ ತನಿಖೆ ಕೈಗೆತ್ತಿಕೊಂಡಿದೆ. ಘಟನೆಗೆ ಸಂಬಂಧಿಸಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಆರೋಪ ಪ್ರತ್ಯಾರೋಪ ಗಳನ್ನು ಮಾಡಿದ್ದರು. ಬಿಜೆಪಿ ಸಿಬಿಐ ಅಥವಾ ಹೈಕೋರ್ಟ್ ಸಿಟಿಂಗ್ ಜಡ್ಜ್ ಅವರ ಮೂಲಕ ತನಿಖೆ ನಡೆಸಲಿ ಎಂದು ಒತ್ತಾಯಿಸಿದ್ದರು. ನಮ್ಮ ಪೊಲೀಸರು ಸಮರ್ಥರಿದ್ದಾರೆ, ಸರ್ಕಾರ ಸಿಐಡಿ ತನಿಖೆ ನಡೆಸಲಿದೆ ಎಂದು ಹೇಳಿತ್ತು. ಅಧಿಕಾರಿಗಳ ತಂಡ ನಗರಕ್ಕೆ ಆಗಮಿಸಿದ್ದು, ಘಟನೆ ಸಂಪೂರ್ಣ ಮಾಹಿತಿ ಕಲೆ ಹಾಕಲು ಮುಂದಾಗಿದೆ.
ಇದನ್ನೂ ಓದಿ: Kitchen tips | ನೀವು ಬಳಸೋ ತುಪ್ಪ ಅಸಲಿಯಾ? ನಕಲಿಯಾ?: ಹೀಗೆ ಪರೀಕ್ಷಿಸಿಕೊಳ್ಳಿ!

