ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಫಲಿತಾಂಶ 2024, ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮುನ್ನಡೆ ಸಾಧಿಸುತ್ತಿದ್ದಾರೆ ಎಂದು ಆರಂಭಿಕ ಟ್ರೆಂಡ್ಗಳು ತೋರಿಸುತ್ತವೆ.
ಅಷ್ಟೇ ಅಲ್ಲದೆ ವಾರಣಾಸಿಯಲ್ಲಿ ಇಂದು ಮೂರು ಹಂತದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟು 1,500 ಪೊಲೀಸರನ್ನು ನಿಯೋಜಿಸಲಾಗಿದೆ. 25 ಗೆಜೆಟೆಡ್ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸರಿಯಾದ ತಪಾಸಣೆ ಇಲ್ಲದೆ ಯಾರೂ ಪ್ರವೇಶಿಸಲು ಸಾಧ್ಯವಿಲ್ಲ ಎಂದು ವಾರಣಾಸಿ ಕಮಿಷನರ್ ಮೋಹಿತ್ ಅಗರ್ವಾಲ್ ತಿಳಿಸಿದ್ದಾರೆ.