ದಿಗಂತ ವರದಿ ಬಳ್ಳಾರಿ:
ಗಣಿನಾಡು ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಆರಂಭವಾಗಿದ್ದು ಕಾಂಗ್ರೆಸ್ ಆರಂಭದಲ್ಲೇ ಕಾಂಗ್ರೆಸ್ ಮುನ್ನಡೆ ಪಡೆದುಕೊಂಡಿದೆ.
ಬಳ್ಳಾರಿ ನಗರದ ವೀರಶೈವ ವಿದ್ಯಾವರ್ಧಕ ಸಂಘದ ಆರ್ ವೈ ಬಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ.
ಅಂಚೆ ಮತದಾನದಲ್ಲಿ 329 ಮತಗಳಿಂದ ಬಿಜೆಪಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 5136
ಬಿಜೆಪಿ 5465 ಮತ ಪಡೆದಿದೆ.
ಮೊದಲ ಸುತ್ತಿನಲ್ಲಿ ಕಾಂಗ್ರೆಸ್ 3940 ಮತಗಳ ಮುನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಗೆ 38303, ಬಿಜೆಪಿಯ ಬಿ.ಶ್ರೀರಾಮುಲು ಪರ 34363 ಮತ ಚಲಾವಣೆಯಾಗಿವೆ.