ಶೆಟ್ಟರ್‌, ಬೊಮ್ಮಾಯಿಗೆ ಮತ್ತೆ ಮುನ್ನಡೆ, ಚಿತ್ರದುರ್ಗದಲ್ಲಿ ಕೈ ಅಭ್ಯರ್ಥಿ ಮೇಲುಗೈ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭಾ ಚುನಾವಣೆಯ 7 ಹಂತಗಳು ಮುಕ್ತಾಯಗೊಂಡಿದ್ದು, ಇಂದು ಮತ ಎಣಿಕೆ ಕಾರ್ಯ ಶುರುವಾಗಿದ್ದು, ಫಲಿತಾಂಶ ಹೊರಬೀಳಲಿದೆ, ಚಿತ್ರದುರ್ಗ, ಬೆಳಗಾವಿ ಹಾಗೂ ಹಾವೇರಿಯಲ್ಲಿ ಏನು ನಡೀತಿದೆ ನೋಡಿ..

ಬೆಳಗಾವಿ: ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಜಗದೀಶ್ ಶೆಟ್ಟರ್ ‌ಮುನ್ನಡೆ.
7ನೇ ಸುತ್ತಿನ ಮತ ಎಣಿಕೆಯಲ್ಲಿ ಜಗದೀಶ್ ಶೆಟ್ಟರ್ 76588 ಮತಗಳ ಮುನ್ನಡೆ.
ಕ್ಷೇತ್ರದಲ್ಲಿ 520187 ಮತ ಎಣಿಕೆ ಕಾರ್ಯ ಮುಕ್ತಾಯ.

ಬಿಜೆಪಿ- 291246
ಕಾಂಗ್ರೆಸ್- 214658
ಮುನ್ನಡೆ- 76588

ಹಾವೇರಿ: ಬಸವರಾಜ ಬೊಮ್ಮಾಯಿ (ಬಿಜೆಪಿ): 2,38,315
ಆನಂದಸ್ವಾಮಿ ಗಡ್ಡದೇವರಮಠ
(ಕಾಂಗ್ರೆಸ್): 2,18,857
ಬಿಜೆಪಿ ಅಭ್ಯರ್ಥಿಗೆ 19,458 ಮತಗಳ ಮುನ್ನಡೆ ಮತಗಳ ಮುನ್ನಡೆ

ಚಿತ್ರದುರ್ಗ : ಲೋಕಸಭಾ ಚುನಾವಣೆ ಕ್ಷೇತ್ರದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮೊದಲನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 32,164 ಮತಗಳನ್ನು ಗಳಿಸಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ 32,239 ಮತಗಳನ್ನು ಗಳಿಸಿ ಮುನ್ನಡೆ ಸಾಧಿಸಿದ್ದಾರೆ.

ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 35,821 ಮತಗಳನ್ನು ಗಳಿಸಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಬಿ ಎಂ ಚಂದ್ರಪ್ಪ 32,405 ಮತಗಳನ್ನು ಗಳಿಸಿ ಹಿನ್ನಡೆ ಅನುಭವಿಸಿದ್ದಾರೆ

ಮೂರನೇ ಸತ್ಯನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 67,985 ಮತಗಳನ್ನು ಗಳಿಸಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಬಿ ಎಂ ಚಂದ್ರಪ್ಪ 64,644 ಮತಗಳನ್ನು ಗಳಿಸಿದ್ದಾರೆ.

ಎರಡು ಮತ್ತು ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮುನ್ನಡೆ ಸಾಧಿಸಿದ್ದಾರೆ. ನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 137830 ಮತಗಳು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 128037 ಮತಗಳನ್ನು ಗಳಿಸಿ ಹಿನ್ನಡೆ ಅನುಭವಿಸಿದ್ದಾರೆ.

ಐದನೆಯ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 1,37,830 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ 1,28,037 ಮತಗಳನ್ನು ಗಳಿಸಿದ್ದಾರೆ.  ಬಿಜೆಪಿ ಅಭ್ಯರ್ಥಿ  ಗೋವಿಂದ ಕಾರಜೋಳ ನಿರಂತರ ಮುನ್ನಡೆಯನ್ನು ಸಾಧಿಸುತ್ತಿದ್ದಾರೆ.

ಆರನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 2,09,765 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 1,90,740 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 22,173 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಏಳನೇ ಕೊತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 2,47,194 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 2,20,643 ಮತಗಳನ್ನು ಗಳಿಸಿದ್ದಾರೆ.  ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮುನ್ನಡೆ ಸಾಧಿಸಿದ್ದಾರೆ.

ಎಂಟನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 2,83,654 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 2,53,504 ಮತಗಳನ್ನು ಗಳಿಸಿದ್ದಾರೆ.  ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮುನ್ನಡೆ ಸಾಧಿಸಿದ್ದಾರೆ.

ಒಂಬತ್ತನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 3,20,669 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 2,84,216 ಮತಗಳನ್ನು ಗಳಿಸಿದ್ದಾರೆ.  ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 36,453 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಹತ್ತನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 3,53,682 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 3,17,564 ಮತಗಳನ್ನು ಗಳಿಸಿದ್ದಾರೆ.  ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 36,118 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!