ದಿಗಂತ ವರದಿ ಕಾಸರಗೋಡು:
ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಐಕ್ಯರಂಗ ಒಕ್ಕೂಟವು ಮುನ್ನಡೆ ಕಾಯ್ದುಕೊಂಡಿದೆ. ಅದರಂತೆ ಐಕ್ಯರಂಗದ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 1,39,646 ಮತಗಳನ್ನು ಪಡೆದು ಭಾರೀ ಮುನ್ನಡೆ ಸಾಧಿಸಿದ್ದಾರೆ.
ಎಡರಂಗದ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 1,13,191 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಎನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ಪಜ್ವ 74,697 ಮತಗಳೊಂದಿಗೆ ಮೂರನೇ ಸ್ಥಾನ ಗಳಿಸಿದ್ದಾರೆ. ಅಂಕಿ ಅಂಶಗಳ ಪ್ರಕಾರ ಹಾಲಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ 26,455 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿನತ್ತ ಧಾವಿಸುತ್ತಿದ್ದಾರೆ.