ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ. ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ. ಬ್ರೇಕ್ ಕೊಟ್ಟಿದ್ದೀರಿ, ಥ್ಯಾಂಕ್ಯೂ ಸೋ ಮಚ್ ಎಂದು ಡಿ.ಕೆ. ಸುರೇಶ್ ಹೇಳಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಪ್ರತಿಸ್ಪರ್ಧಿ ಬಿಜೆಪಿಯ ಡಾ. ಸಿಎನ್ ಮಂಜುನಾಥ್ ಗೆಲುವು ಸಾಧಿಸಿದ್ದು, ಅಧಿಕೃತ ಪ್ರಕಟಣೆಯೊಂದೇ ಬಾಕಿಯಿದೆ.
ಮತದಾರ ಪ್ರಭುಗಳು ಕೊಟ್ಟಿರುವ ತಿರ್ಮಾನವನ್ನು ಸ್ವಾಗತಿಸುತ್ತೇನೆ. ಗೆಲುವು ಸಾಧಿಸಿದ ಡಾ. ಮಂಜುನಾಥ್ ಅವರಿಗೆ ಧನ್ಯವಾದ ಹೇಳುತ್ತೇನೆ. ನನಗೆ ಅವಕಾಶ ಕೊಟ್ಟ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿಯವರಿಗೆ ಹಾಗೂ ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದ್ದಾರೆ.