ಹೊಸದಿಗಂತ ವರದಿ: ವಿಜಯಪುರ:
ನಗರದ ಸೈನಿಕ ಶಾಲೆಯಲ್ಲಿ ನಡೆದ ಲೋಕಸಭಾ ಚುನಾವಣೆ ವಿಜಯಪುರ ಮೀಸಲು ಮತಕ್ಷೇತ್ರದ ಮತ ಎಣಿಕೆ 22 ಸುತ್ತು ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ 77,229 ಮತಗಳ ಅಂತರದಿಂದ ನಾಲ್ಕನೇ ಬಾರಿಗೂ ಗೆಲುವು ಸಾಧಿಸಿದ್ದಾರೆ.
ಮತ ಎಣಿಕೆ ಆರಂಭದಿಂದಲೂ ಮುನ್ನಡೆ ಸಾಧಿಸುತ್ತ ಬಂದಿದ್ದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ 6,72,781 ಮತಗಳನ್ನು ಪಡೆದಿದ್ದು, ಪ್ರತಿಸ್ಪರ್ಧಿಯಾದ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ 5,95,552 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.