ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯ ಫಲಿತಾಂಶ ಜನತೆಯ ಫಲಿತಾಂಶವಾಗಿದೆ. ಇದು ಜನಾದೇಶ ಮೋದಿಯವರ ವಿರುದ್ಧ ಎಂಬುದು ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಇದು ಮೋದಿಯವರ ನೈತಿಕ ಮತ್ತು ರಾಜಕೀಯ ಸೋಲು. ಇದು ಜನರ ಗೆಲುವು, ಪ್ರಜಾಪ್ರಭುತ್ವದ ಗೆಲುವು ಎಂದು ಹೇಳಿಕೆ ನೀಡಿದ್ದಾರೆ.
ಇದು ಮೋದಿ, ಜನರ ನಡುವಿನ ಯುದ್ಧ ಎಂದು ನಾವು ಚುನಾವಣೆಗೂ ಮೊದಲೇ ಹೇಳಿದ್ದೆವು. ಈ ಸಲ ಜನ ಯಾರಿಗೂ ಪೂರ್ಣ ಬಹುಮತ ನೀಡಿಲ್ಲ. ಒಬ್ಬ ವ್ಯಕ್ತಿಯ ಮುಖ ಇಟ್ಟುಕೊಂಡು ಬಿಜೆಪಿ ಚುನಾವಣೆ ಎದುರಿಸಿದೆ. ಅದನ್ನು ಜನರು ಸೋಲಿಸಿದ್ದಾರೆ. ಇದು ಬಿಜೆಪಿಯ ನೈತಿಕ ಸೋಲು ಎಂದು ಖರ್ಗೆ ಹೇಳಿದ್ದಾರೆ.
ನಾವು ಜನರ ತೀರ್ಪನ್ನು ಬಹಳ ವಿನಮ್ರತೆಯಿಂದ ಗೌರವಿಸುತ್ತೇವೆ. ಮೋದಿ ನೇತೃತ್ವದ ಎನ್ಡಿಎಗೆ ದೊಡ್ಡ ನಷ್ಟ ಆಗಿದೆ. ಚುನಾವಣೆ ಪ್ರಚಾರದ ವೇಳೆ ಮೋದಿ ಸುಳ್ಳುಗಳನ್ನ ಹೇಳಿದ್ದಾರೆ. ಆಡಳಿತರೂಢ ಸರ್ಕಾರ ಹೆಜ್ಜೆ ಹೆಜ್ಜೆಗೂ ನಮಗೆ ಅಡ್ಡಿ ಮಾಡುತ್ತಿದ್ದರು. ನಮ್ಮ ಪಕ್ಷದ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿದ್ದರು. ನಮ್ಮ ಬಣದ ನಾಯಕರ ಮೇಲೆ ದಾಳಿ ಮಾಡಿಸಿದ್ದರು. ಆದರೆ ಕಾಂಗ್ರೆಸ್ ಪಾಸಿಟಿವ್ ದೃಷ್ಟಿಯಿಂದಲೇ ಕ್ಯಾಂಪೇನ್ ಮಾಡಿ ಜನರ ಮುಂದೆ ಹೋದೆವು. ಜನರು ನಮ್ಮೊಂದಿಗೆ ಸೇರಿದರು, ನಮ್ಮನ್ನು ಬೆಂಬಲಿಸಿದರು. ಮೋದಿ ಮಾಡಿದ ಕ್ಯಾಂಪೇನ್ ಹಾಗೂ ಮಾತುಗಳನ್ನು ಇತಿಹಾಸ ನೆನಪಿಡುತ್ತದೆ. ಕಾಂಗ್ರೆಸ್ನ ಪ್ರಣಾಳಿಕೆ ವಿರುದ್ಧ ಕೂಡ ಪ್ರಧಾನಿ ಅಪಪ್ರಚಾರ ಮಾಡಿದರು ಎಂದು ಆರೋಪಿಸಿದ್ದಾರೆ.
ಭಾರತ್ ಜೋಡೋ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದು. 5 ನ್ಯಾಯ್ ಹಾಗೂ ನಮ್ಮ ಗ್ಯಾರಂಟಿಗಳು ಮನೆ ಮನೆಗೆ ತಲುಪಿದವು. ಬಿಜೆಪಿಯವರು ಅಹಂಕಾರದಿಂದ ಸಂವಿಧಾನ ದುರ್ಬಳಕೆ ಮಾಡಿಕೊಂಡರು. ಸರ್ಕಾರಿ ಸಂಸ್ಥೆಗಳನ್ನು ದಬ್ಬಾಳಿಕೆಯಿಂದ ತಮ್ಮ ಕಡೆ ಮಾಡಿಕೊಂಡರು. ಇದು ಜನರ ಗೆಲುವು, ಪ್ರಜಾಪ್ರಭುತ್ವದ ಗೆಲುವು. ಇದು ಮೋದಿ ಹಾಗೂ ಜನರ ನಡುವಿನ ಯುದ್ಧ ಅಂತ ನಾವು ಹೇಳಿದ್ದೆವು. ಈ ಸಲ ಜನರು ಯಾರಿಗೂ ಪೂರ್ಣ ಬಹುಮತ ನೀಡಿಲ್ಲ. ಕಾಂಗ್ರೆಸ್ ಹಾಗೂ ಇಂಡಿಯಾ ಘಟ ಬಂಧನ್ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.