ಮುಂದಿನ 48 ಗಂಟೆಗಳಲ್ಲಿ ರಾಜ್ಯದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮೇಣ 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕಡಿಮೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಬಿರುಗಾಳಿ ಬೀಸುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್ ಆಗಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.