ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಅಮೇಥಿಯಿಂದ ಮರು ಆಯ್ಕೆ ಬಯಸಿದ್ದ ಕೇಂದ್ರ ಸಚಿವೆ, ಬಿಜೆಪಿ ನಾಯಕಿ ಸ್ಮೃತಿ ಇರಾನಿ ಸೋಲು ಕಂಡಿದ್ದಾರೆ.
ಗೆಲುವು ಕಂಡಿರುವ ಕಿಶೋರಿ ಲಾಲ್ ಶರ್ಮಾ ಅವರಿಗೆ ಅಭಿನಂದನೆಗಳು, ಸೋಲು ಎಂದ ಮಾತ್ರಕ್ಕೆ ಕೆಲಸ ಮಾಡುವುದಿಲ್ಲ ಎಂದಲ್ಲ. ಅಮೇಥಿಯಲ್ಲಿ ನನ್ನ ಸೇವೆ ಮುಂದುವರಿಯುತ್ತದೆ.
ಕ್ಷೇತ್ರ ಮತ್ತು ಪಕ್ಷದ ಸೇವೆಯಲ್ಲಿ ಅತ್ಯಂತ ಸಮರ್ಪಣೆ ಮತ್ತು ನಿಷ್ಠೆಯಿಂದ ದುಡಿದ ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.