ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದ ನೂತನ ಸಂಸದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಖಾಸಗಿ ಹೋಟೆಲ್ ನಲ್ಲಿ ಎನ್ ಡಿಎ ಮಿತ್ರಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ಕುಮಾರಸ್ವಾಮಿ ಇಂದು ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದರು.
ನೂತನವಾಗಿ ಆಯ್ಕೆ ಆಗಿರುವ ನಾಯಕರು ದೆಹಲಿಗೆ ಬರುವಂತೆ ಅಮಿತ್ ಶಾ ಆಹ್ವಾನ ನೀಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ 293 ಸ್ಥಾನಗಳನ್ನು ಮತ್ತು I.N.D.I.A 234 ಸ್ಥಾನಗಳನ್ನು ಗೆದ್ದಿದೆ. ಸರ್ಕಾರ ರಚನೆಗೆ 272 ಸ್ಥಾನಗಳ ಅಗತ್ಯವಿದೆ.