ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ, ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಅವಧಿಗೆ ಮರು ಆಯ್ಕೆಯಾದ ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಪ್ರಧಾನಿ ಮೋದಿಯವರಿಗೆ ಶುಭ ಹಾರೈಸಿರುವ ನೆತನ್ಯಾಹು, “ಸತತ ಮೂರನೇ ಅವಧಿಗೆ ಮತ್ತೊಮ್ಮೆ ಆಯ್ಕೆಯಾಗಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ನನ್ನ ಆತ್ಮೀಯ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಭಾರತ ಮತ್ತು ಇಸ್ರೇಲ್ ನಡುವಿನ ಸ್ನೇಹವು ಹೊಸ ಎತ್ತರಕ್ಕೆ ಏರುತ್ತಲೇ ಇರಲಿ. ಬಧಾಯಿ ಹೋ!” ಎಂದು X ನಲ್ಲಿ ಬರೆದಿದ್ದಾರೆ.