ಹೊಸದಿಗಂತ ಡಿಜಿಟಲ್ ಡೆಸ್ಕ್:
ಹವಾಮಾನ ವೈಪರೀತ್ಯದ ಪರಿಣಾಮ ಉತ್ತರಾಖಂಡದಲ್ಲಿ ಅಪಾಯಕ್ಕೆ ಸಿಲುಕಿರುವ ಚಾರಣಿಗರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ದುರಂತದಲ್ಲಿ ಪಾರಾದವರನ್ನು ಸುರಕ್ಷಿತವಾಗಿ ಡೆಹ್ರಾಡೂನ್ ಗೆ ಕರೆತರಲಾಗಿದೆ.
ಈ ದುರಂತದಲ್ಲಿ ಕರ್ನಾಟಕದ ನಾಲ್ವರು ಚಾರಣಿಗರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿಗಳಿದ್ದು, ಇದನ್ನು ಖಚಿತ ಪಡಿಸಿಕೊಳ್ಳುವಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ.
ಮಂಗಳವಾರ ಉತ್ತರಾಖಂಡದ ಸಹಸ್ರತಾಲ್‌ನಿಂದ ಗೈಡ್‌ಗಳ ಸಹಿತ 20 ಮಂದಿ ಚಾರಣ ಆರಂಭಿಸಿದ್ದರು. ಚಾರಣದ ಗಮ್ಯ ತಲುಪಿ, ಶಿಬಿರಕ್ಕೆ ಹಿಂತಿರುಗುವ ಹಾದಿಯಲ್ಲಿ ಹಿಮ, ಗಾಳಿಯ ಹೊಡೆತಕ್ಕೆ ಸಿಲುಕಿದ್ದರು.
ಈ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿದ್ದರೆ ಉಳಿದವರು ಅತಂತ್ರರಾಗಿದ್ದರು. ಘಟನೆಯ ಮಾಹಿತಿ ಸಿಗುತ್ತಿದ್ದಂತೆಯೇ ಉತ್ತರಾಖಂಡ ಸರ್ಕಾರ, ಭಾರತೀಯ ಪರ್ವತಾರೋಹಣ ಒಕ್ಕೂಟ ಮತ್ತು ಭಾರತ ಸರ್ಕಾರದ ಗೃಹ ಸಚಿವಾಲಯ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ ಕೈಗೆತ್ತಿಕೊಂಡಿದೆ.
ಘಟನಾ ಸ್ಥಳಕ್ಕೆ ವಾಯುಪಡೆಯ ಎರಡು ಚೀತಾ ಹೆಲಿಕಾಪ್ಟರ್ ಸಹಿತ ನಾಲ್ಕು ಹೆಲಿಕಾಪ್ಟರ್ ಗಳು ಧಾವಿಸಿದ್ದು ರಕ್ಷಣಾ ಕಾರ್ಯಕ್ಕೆ ಸಾಥ್ ನೀಡಿವೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.