ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ದೆಹಲಿಯ ಲಜಪತ್ ನಗರದಲ್ಲಿರುವ ಕಣ್ಣಿನ ಆಸ್ಪತ್ರೆಯಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದೆ.
ಬೆಳಗ್ಗೆ 11.30ರ ಸುಮಾರಿಗೆ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ 16 ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟರು.
ಇಲ್ಲಿಯವರೆಗೆ ಯಾವುದೇ ಗಾಯಗಳು ಅಥವಾ ಕಾರಣಗಳ ಬಗ್ಗೆ ವರದಿಯಾಗಿಲ್ಲ. ಆಸ್ಪತ್ರೆಯು ನವದೆಹಲಿಯ ಲಜಪತ್ ನಗರ ಪ್ರದೇಶದ ವಿನೋಬಪುರಿ ಮೆಟ್ರೋ ನಿಲ್ದಾಣದ ಬಳಿ ಘಟನೆ ನಡೆದಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.