ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿಡಿಪಿ ನಾಯಕ ಎನ್.ಚಂದ್ರಬಾಬು ನಾಯ್ಡು ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಮುಂದೂಡಲಾಗಿದೆ.
ಜೂನ್ 9 ರಂದು ಅಮರಾವತಿಯಲ್ಲಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕರಿಸಬೇಕಿತ್ತು, ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭ ನಡೆಯುತ್ತಿರುವುದರಿಂದ ನಾಯ್ಡು ಪ್ರಮಾಣ ವಚನ ಸ್ವಲ್ಪ ತಡವಾಗಿ ನಡೆಯಲಿದೆ.
ವರದಿಗಳ ಪ್ರಕಾರ, ಚಂದ್ರಬಾಬು ಅವರು ಜೂನ್ 12 ರಂದು ಅಮರಾವತಿಯಲ್ಲಿ ಆಂಧ್ರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಚಂದ್ರಬಾಬು ನಾಯ್ಡು ಅವರ ಪ್ರಮಾಣ ವಚನ ಸಮಾರಂಭದಲ್ಲಿ ಮೋದಿ ಪಾಲ್ಗೊಳ್ಳುವ ಸಾಧ್ಯತೆ ಇದೆ.