ಹೊಸದಿಗಂತ ಡಿಜಿಟಲ್ ಡೆಸ್ಕ್:
ನೋಯ್ಡಾ ಸೆಕ್ಟರ್ 119 ರ ಅಪಾರ್ಟ್‌ಮೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ರಾತ್ರಿ ಈ ಘಟನೆ ನಡೆದಿದೆ.
ಅಗ್ನಿಶಾಮಕ ಸೇವೆಯ ಅಧಿಕಾರಿಗಳ ಪ್ರಕಾರ, ಸೆಕ್ಟರ್ 119 ರಲ್ಲಿರುವ ಎಲ್ಡೆಕೊ ಆಮಂತ್ರನ್ ಸೊಸೈಟಿಯ 17 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.