ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ನೀರಿನ ಕೊರತೆ ನೀಗಿಸಲು ಶುಕ್ರವಾರ 137 ಕ್ಯೂಸೆಕ್ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಹೆಚ್ಚುವರಿ ನೀರು ಬಿಡುಗಡೆ ಮಾಡಲು ಹಿಮಾಚಲ ಪ್ರದೇಶ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಜೀರಾಬಾದ್ ಬ್ಯಾರೇಜ್ ಮೂಲಕ ನೀರು ಬಿಡಲು ಅನುಕೂಲ ಮಾಡಿಕೊಡುವಂತೆ ಹರಿಯಾಣ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಹರ್ಯಾಣಕ್ಕೆ ಪೂರ್ವ ಸೂಚನೆಯ ನಂತರ ನೀರು ಬಿಡುವಂತೆ ಹಿಮಾಚಲ ಸರ್ಕಾರಕ್ಕೆ ನ್ಯಾಯಾಲಯ ಹೇಳಿದೆ. ನೀರು ಪೋಲು ಮಾಡದಂತೆ ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.
ಕಳೆದ ವಾರ, ದೆಹಲಿ ಸರ್ಕಾರವು ನೆರೆಯ ರಾಜ್ಯಗಳಾದ ಹರಿಯಾಣ, ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶದಿಂದ ಹೆಚ್ಚುವರಿ ನೀರು ಸರಬರಾಜು ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತು. ಸುಡುವ ಶಾಖದ ನಡುವೆ, ರಾಷ್ಟ್ರ ರಾಜಧಾನಿ ಪ್ರಸ್ತುತ ನೀರಿನ ಕೊರತೆಯಿಂದ ಬಳಲುತ್ತಿದೆ.