ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾವು ರಾಜೀನಾಮೆ ಕೇಳಿರಲಿಲ್ಲ. ಅವರೇ ಸ್ವಯಂಪ್ರೇರಿತರಾಗಿ ರಾಜೀನಾಮೆ ಕೊಟ್ಟಿದ್ದಾರೆ, ಸರ್ಕಾರಕ್ಕೆ ಮುಜುಗರ ಮಾಡಬಾರದು ಎನ್ನುವುದು ಅವರ ಉದ್ದೇಶ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಮಂತ್ರಿಗೂ ಇಷ್ಟು ದೊಡ್ಡ ಮಟ್ಟದ ಮೊತ್ತವನ್ನು ದುರುಪಯೋಗ ಮಾಡುವ ಧೈರ್ಯ ಮಾಡಲ್ಲ. ಈ ರೀತಿ ಯಾರೂ ಮಾಡಬಾರದು ಎಂದರು.
ರಾಜೀನಾಮೆ ಕೊಡಿ ಎಂದು ಹೇಳಿಲ್ಲ. ಅವರೇ ಸ್ವತಃ ಜವಾಬ್ದಾರಿಯುತವಾಗಿ ಬಂದು ರಾಜೀನಾಮೆ ನೀಡಿದ್ದಾರೆ. ಪಾರ್ಟಿಗೆ ನಾನು ಮುಜುಗರ ಮಾಡಲ್ಲ ಅಂತಾ ಹೇಳಿದ್ದಾರೆ. ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಿ ಎಂದು ಹೇಳಿಲ್ಲ. ಯಾಕೆಂದರೆ ನಮಗೂ ವಾಸ್ತವ ಏನು ಎಂದು ಗೊತ್ತಿಲ್ಲ ಎಂದು ಹೇಳಿದರು.