ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಜೋರು ಮಳೆ ಸುರಿಯುತ್ತಿದೆ. ರಾಜ್ಯದಲ್ಲಿಯೂ ಸಿಡಿಲು ಸಹಿತ ಮಳೆ ಹೆಚ್ಚಾಗಿದ್ದು, ಸಿಡಿಲಿಗೆ ಇಬ್ಬರು ಮೃತಪಟ್ಟಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಸಿಡಿಲಿನಿಂದ ಮೂವರು ಮೃತಪಟ್ಟಿದ್ದರು. ಗದಗ ಜಿಲ್ಲೆಯ ನರಗುಂದ ತಾಲೂಕಿನ ಬಂಡೆಮ್ಮನಗರ ಗ್ರಾಮದ ಬಳಿ ಕುರಿ ಮೇಯಿಸಲು ಹೋಗಿದ್ದ 17 ವರ್ಷದ ಯಲ್ಲಪ್ಪ ಮೃತಪಟ್ಟಿದ್ದಾರೆ. 15 ವರ್ಷದ ಮತ್ತೊಬ್ಬ ಬಾಲಕ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ.
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜೆ.ರಾಂಪುರ ಗ್ರಾಮದಲ್ಲಿ ಹೊಲದಲ್ಲಿ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ರತ್ನಮ್ಮ ಓತಗೇರಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.