ಬೀದರ್‌ ಎಂಜಿನಿಯರಿಂಗ್ ಕಾಲೇಜಿನಿಂದ 19 ವಿದ್ಯಾರ್ಥಿಗಳು ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಿಎನ್‌ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಗುಂಪು ಸಂಘರ್ಷದಲ್ಲಿ ಭಾಗಿಯಾಗಿದ್ದ 19 ವಿದ್ಯಾರ್ಥಿಗಳನ್ನು  ಕಾಲೇಜಿನಿಂದ ಅಮಾನತು ಮಾಡಲಾಗಿದೆ. ಈ ಬಗ್ಗೆ ಕಾಲೇಜಿನ ಆಡಳಿತ ಮಂಡಳಿ ನಿರ್ಧಾರ ಮಾಡಿದೆ.

ಆಂತರಿಕ ವಿಚಾರಣೆ ಮುಗಿಯುವವರೆಗೆ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದ್ದು ಈಗಾಗಲೇ ಕಾಲೇಜಿನಲ್ಲಿ ಐದು ಜನರ ಉಪನ್ಯಾಸಕರ ವಿಚಾರಣೆ ಸಮಿತಿಯನ್ನು ರಚನೆ ಮಾಡಲಾಗಿದೆ.

ಈ ಪ್ರಕರಣದಿಂದ ಕಾಲೇಜು ಆಡಳಿತ ಮಂಡಳಿಗೆ ಬಾರಿ ಮುಜುಗರವಾಗಿತ್ತು. ಈಗ ಕಾಲೇಜಿನ ನಿಯಮದ ಅಡಿಯಲ್ಲಿ ಪ್ರಕರಣದಲ್ಲಿ ಭಾಗಿಯಾದ ವಿದ್ಯಾರ್ಥಿಗಳ ಆಂತರಿಕ ವಿಚಾರಣೆ ಮಾಡುವ ಉದ್ದೇಶದಿಂದ ಅಮಾನತು ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!