ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿ 7 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರದ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿ ಗ್ರಾಮದಲ್ಲಿ ನಡೆದಿದೆ.
7 ವರ್ಷದ ತುಳಸಿ ಕಾತ್ರಿಕಾಯನಹಟ್ಟಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು. ಇಂದು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾಳೆ.
ಯಾರೋ ತಪ್ಪು ಅಥವಾ ನಿರ್ಲಕ್ಷ್ಯದಿಂದಾಗಿ ಬಾಲಕಿ ಮೃತಪಟ್ಟಿದ್ದು, ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ.