ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲಪ್ರದೇಶದ ಮಂಡಿಯ ನೂತನ ಸಂಸದೆ ಕಂಗನಾ ರಣಾವತ್ ಗೆ ಕಪಾಳಮೋಕ್ಷ ಮಾಡಿದ್ದ ಕಾನ್‌ಸ್ಟೇಬಲ್ ಕುಲ್ವಿಂದರ್ ಕೌರ್‌ರನ್ನು ಅರೆಸ್ಟ್ ಮಾಡಲಾಗಿದೆ.
ಚಂಡೀಗಢ ವಿಮಾನ ನಿಲ್ದಾಣದಲ್ಲಿ ಗುರುವಾರ ಕಂಗನಾ ಮೇಲೆ CISF ಸಿಬ್ಬಂದಿ ಕೌರ್ ಹಲ್ಲೆ ನಡೆಸಿದ್ದರು. ಇದಾದ ಬಳಿಕ ಆಕೆಯನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು.
ಕೌರ್ ವಿರುದ್ಧ ಕೇಸ್ ದಾಖಲಿಸಲಾಗಿದೆ. ಈ ನಿಟ್ಟಿನಲ್ಲಿ ಆಕೆಯನ್ನು ಅರೆಸ್ಟ್ ಮಾಡಲಾಗಿದೆ.
ಏನಿದು ಘಟನೆ?
ಮಂಡಿಯ ನೂತನ ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಸಿಐಎಸ್ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಚಂಡೀಗಢ ವಿಮಾನ ನಿಲ್ದಾಣದಲ್ಲಿ (Chandigarh Airport) ಕಪಾಳಮೋಕ್ಷ ಮಾಡಿದ ಘಟನೆ ನಡೆದಿತ್ತು. ರೈತರ ಆಂದೋಲನಕ್ಕೆ ಸಂಬಂಧಿಸಿದಂತೆ ಕಂಗನಾ ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಕಪಾಳಮೋಕ್ಷ ಮಾಡಿರುವುದಾಗಿ ಆಕೆ ಹೇಳಿಕೊಂಡಿದ್ದರು.