ಹೊಸದಿಗಂತ ಡಿಜಿಟಲ್ ಡೆಸ್ಕ್:
ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲು ನರೇಂದ್ರ ಮೋದಿ (Narendra Modi) ಅವರು ಸಿದ್ಧರಾಗಿದ್ದು, ಜೂನ್ 9ರಂದು ಸಂಜೆ 6 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇದಕ್ಕೂ ಮೊದಲು, ತಮ್ಮ ರಾಜಕೀಯ ಗುರು, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ (LK Advani) ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ದೆಹಲಿಯಲ್ಲಿರುವ ಎಲ್.ಕೆ.ಅಡ್ವಾಣಿ ಅವರ ನಿವಾಸಕ್ಕೆ ತೆರಳಿದ ಮೋದಿ ಅವರು ಅಡ್ವಾಣಿ ಅವರ ಜತೆ ಮಾತುಕತೆ ನಡೆಸಿ, ಆಶೀರ್ವಾದ ಪಡೆದರು.
2014, 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಳಿಕವೂ ಮೋದಿ ಅವರು ಅಡ್ವಾಣಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಅಡ್ವಾಣಿ ಅವರ ಭೇಟಿ ಬಳಿಕ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನಕ್ಕೆ ತೆರಳಿ, ಸರ್ಕಾರ ರಚಿಸುವ ಕುರಿತು ಹಕ್ಕು ಮಂಡನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಕೋವಿಂದ್ ಅವರನ್ನೂ ಭೇಟಿಯಾದ ಮೋದಿ
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಕೂಡ ನರೇಂದ್ರ ಮೋದಿ ಅವರು ಭೇಟಿಯಾದರು. ರಾಮನಾಥ್ ಕೋವಿಂದ್ ಹಾಗೂ ಅವರ ಪತ್ನಿಯನ್ನು ಭೇಟಿಯಾದ ಮೋದಿ ಹಲವು ವಿಷಯಗಳ ಕುರಿತು ಚರ್ಚಿಸಿದರು .
ನರೇಂದ್ರ ಮೋದಿ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಶುಕ್ರವಾರ ಆಯ್ಕೆಯಾಗಿದ್ದಾರೆ.