ರೇವಣ್ಣ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮೂಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಾಜಿ ಸಚಿವ ಎಚ್‌.ಡಿ. ರೇವಣ್ಣ ವಿರುದ್ಧ ದಾಖಲಾಗಿದ್ದ 2 ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜೂನ್ 14ಕ್ಕೆ ಹೈಕೋರ್ಟ್ ಮೂಂದೂಡಿದೆ.

ನ್ಯಾ. ಕೃಷ್ಣ ಧೀಕ್ಷಿತ್ ಅವರಿದ್ದ ಪೀಠ ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಇದೇ ವೇಳೆ ರೇವಣ್ಣ ಜಾಮೀನು ರದ್ದು ಮಾಡಲು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯೂ ಮುಂದೂಡಿಕೆಯಾಗಿದೆ..

ಹೊಳೆನರಸೀಪುರದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ (Prajwal Revanna Case), ಕೆ.ಆರ್.ನಗರದ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ. ಪ್ರಕರಣಗಳಲ್ಲಿ ಹುರುಳಿಲ್ಲ, ಇದು ರಾಜಕೀಯ ಪ್ರೇರಿತವಾಗಿದೆ. ಹೀಗಾಗಿ ಎಫ್‌ಐಆರ್‌ಗಳನ್ನು ರದ್ದು ಮಾಡಬೇಕು ಎಂದು ರೇವಣ್ಣ, ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇತ್ತೀಚೆಗೆ ಕೆ.ಆರ್‌.ನಗರದ ಸಂತ್ರಸ್ತೆಯ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ಆರು ದಿನಗಳ ಬಳಿಕ ಅವರಿಗೆ ಮೇ 13ರಂದು ಜಾಮೀನು ದೊರೆತಿತ್ತು. ನಂತರ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna case) ಅವರಿಗೆ ಮೇ 20ರಂದು ಜಾಮೀನು (Bail) ಮಂಜೂರಾಗಿತ್ತು. ಇದೀಗ ಎರಡು ಎಫ್‌ಐಆರ್‌ ರದ್ದು ಮಾಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!