ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 6.29 ಕೋಟಿ ರೂಪಾಯಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ.
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಇಬ್ಬರು ಮಹಿಳೆಯರ ಬಳಿ ಚಿನ್ನ ಪತ್ತೆಯಾಗಿದೆ. ಮಹಿಳೆಯರಿಬ್ಬರನ್ನು ಬಂಧಿಸಲಾಗಿದೆ.
ನಾಜಿ ಲೆಟಿ ಎಂಬುವವರಿಂದ 4ಕೆಜಿ 61 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಆರತಿ ಸೆಗಾಲ್ ಎಂಬುವವರಿಂದ 2 ಕೆಜಿ 181 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ.
ಅಲ್ಲದೇ, ವಿಮಾನ ನಿಲ್ದಾಣದ ಶೌಚಾಲಯದಲ್ಲಿಯೂ 2 ಕೆಜಿ 772 ಗ್ರಾಂ ಚಿನ್ನ ಪತ್ತೆಯಾಗಿದೆ. ಬ್ಯಾಂಕಾಕ್ ನಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದ ಇಬ್ಬರು ಮಹಿಳೆಯರ ಬಳಿ ಕಸ್ಟಮ್ ಅಧಿಕಾರಿಗಳಿಂದ ಪರಿಶೀಲನೆ ವೇಳೆ ಬ್ಯಾಗ್ ನಲ್ಲಿ ಚಿನ್ನ ಇರುವುದು ಪತ್ತೆಯಾಗಿದೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಅಧಿಕಾರಿಗಳು ತನಿಖೆ ನಡೆಸಿದ್ದಾರೆ.