ಜನಪ್ರತಿನಿಧಿಗಳು ಜವಾಬ್ದಾರಿಯುತವಾಗಿ ಮಾತನಾಡಬೇಕು: ನಿಖಿಲ್ ಕುಮಾರಸ್ವಾಮಿ

ಹೊಸದಿಗಂತ ವರದಿ,ಮಂಡ್ಯ :

ಜನಪ್ರತಿನಿಧಿಗಳು ಬಹಳ ಜವಾಬ್ದಾರಿಯುತವಾಗಿ ಮಾತನಾಡಬೇಕು. ಅಧಿಕಾರದಲ್ಲಿದ್ದಾಗ ಏನು ಬೇಕಾದರೂ ಮಾತನಾಡಬಹುದು ಎಂಬ ಉದ್ದಟನ ಬಿಡಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ನವರು ಗಂಡಸ್ತನದ ಬಗ್ಗೆ ಮಾತನಾಡಿದ್ದರು. ಅದಕ್ಕೆ ಈಗ ಜನ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದರು.

2019ರ ಚುನಾವಣೆಯಲ್ಲಿ ನಾನು ತಾಂತ್ರಿಕವಾಗಿ ಸೋತಿರಬಹುದು. ಆದರೆ ಆ ಸೋಲು ಸೋಲಲ್ಲ ಎಂದ ಅವರು, ಅಂದು ಏನೆಲ್ಲಾ ಮಾಡಿದರು, ಮೈತ್ರಿ ಪಕ್ಷದವರೇ ಹೇಗೆ ಕೈ ಕೊಟ್ಟರು ಎಂಬುದು ಜಗಜ್ಜಾಹೀರಾಗಿದೆ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ರಾಜ್ಯಕ್ಕೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ನಿಲ್ಲಬೇಕು ಎಂಬುದು ಜನರ ಅಪೇಕ್ಷೆಯಾಗಿತ್ತು. ಈ ಹಿನ್ನೆಲೆಯಲ್ಲಿ ಎಲ್ಲಾ ವರ್ಗದ ಜನರು ಕುಮಾರಣ್ಣಗೆ ಆಶೀರ್ವಾದ ಮಾಡಿದ್ದಾರೆ. ಇನ್ನು ಐದು ವರ್ಷ ಕುಮಾರಣ್ಣ ಜನಪರ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!