ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಭಾನುವಾರ ರಾಷ್ಟ್ರ ರಾಜಧಾನಿಯಲ್ಲಿ ಹಲವಾರು ನೆರೆಯ ರಾಷ್ಟ್ರಗಳ ಮುಖ್ಯಸ್ಥರು ಸೇರಿದಂತೆ ವಿದೇಶಿ ಗಣ್ಯರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮೋದಿಯವರ ಹ್ಯಾಟ್ರಿಕ್ ಸಮಾರಂಭಕ್ಕೆ 8,000 ರಿಂದ 9,000 ಅತಿಥಿಗಳನ್ನು ಆಹ್ವಾನಿಸಲಾಗಿದ್ದು, ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ನಡೆಯುತ್ತಿವೆ ಎಂದು ವರದಿಯಾಗಿದೆ.
ಮೋದಿಯವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರು, ಸೆಂಟ್ರಲ್ ವಿಸ್ಟಾ ಯೋಜನೆ, ಹೊಸ ಸಂಸತ್ ಕಟ್ಟಡ ನಿರ್ಮಿಸುವವರು, ತೃತೀಯಲಿಂಗಿ, ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳ ಫಲಾನುಭವಿಗಳು, ಉತ್ತರಾಖಂಡ ಗಣಿಗಾರರ ಪಾರುಗಾಣಿಕಾ ತಂಡ, ವಂದೇ ಭಾರತ್, ಮೆಟ್ರೋದಂತಹ ರೈಲ್ವೆ ಯೋಜನೆಯಲ್ಲಿ ಪ್ರಮುಖ ಪಾತ್ರವಹಿಸಿದವರು, ಮತ್ತು 50 ಧಾರ್ಮಿಕ ಗುರುಗಳು ಸೇರಿದ್ದಾರೆ.
ಎಲ್ಲಾ ಧರ್ಮಗಳ, ಪದ್ಮಭೂಷಣ, ಪದ್ಮವಿಭೂಷಣ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು, ವಿಕಾಸ ಭಾರತ ರಾಯಭಾರಿಗಳು ಮತ್ತು ಬುಡಕಟ್ಟು ಮಹಿಳೆಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.