ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಕೇವಲ ಒಂದು ಸಿಗರೇಟ್ ವಿಚಾರಕ್ಕೆ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡುಗೋಡಿ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ವಿಶಾಲ್, ಆಕಾಶ್, ಸಂತೋಷ್, ಸುರೇಂದರ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿದೆ.
ಆರೋಪಿಗಳು ದೊಣ್ಣೆ, ಕಲ್ಲು, ಬೆಲ್ಟ್ ಮತ್ತು ಕ್ರೇಟ್ನಿಂದ ಧನಂಜಯ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಹೋಟೆಲ್ ವ್ಯವಸ್ಥಾಪಕರ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳು ಮತ್ತು ಹಲ್ಲೆಗೊಳಗಾದ ಧನಂಜಯ್ ಎಲ್ಲರೂ ಒಂದೇ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಹಲ್ಲೆಗೊಳಗಾದ ಯುವಕ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾನೆ. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.