ಡೆನ್ಮಾರ್ಕ್‌ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸನ್‌ ಮೇಲಿನ ಹಲ್ಲೆ ಖಂಡಿಸಿದ ನರೇಂದ್ರ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಡೆನ್ಮಾರ್ಕ್‌ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸನ್‌ ಮೇಲೆ ನಡೆದ ಹಲ್ಲೆಯನ್ನು ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಡೆನ್ಮಾರ್ಕ್‌ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸನ್‌ ಅವರ ಮೇಲಿನ ಹಲ್ಲೆಯನ್ನು ಖಂಡಿಸುತ್ತೇವೆ.ನನ್ನ ಸ್ನೇಹಿತನಿಗೆ ಉತ್ತಮ ಆರೋಗ್ಯವನ್ನು ಬಯಸುತ್ತೇವೆ’ ಎಂದಿದ್ದಾರೆ.

ಡೆನ್ಮಾರ್ಕ್‌ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸನ್‌ ಮೇಲೆ ಹಲ್ಲೆ ನಡೆದಿದ್ದು, ಸಣ್ಣ ಪ್ರಮಾಣದ ಗಾಯ ಆಗಿದೆ ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.

ಕುತ್ತಿಗೆ ಸಣ್ಣದಾಗಿ ಉಳುಕಿರುವುದು ಹೊರತುಪಡಿಸಿದರೆ ಪ್ರಧಾನಿ ಆರೋಗ್ಯವಾಗಿಯೇ ಇದ್ದಾರೆ. ಆದರೆ ಘಟನೆಯಿಂದ ಅವರು ಆಘಾತಗೊಂಡಿದ್ದಾರೆ ಎಂದು ಹೇಳಿದೆ.

ಶುಕ್ರವಾರ ಸಂಜೆ ಕೋಪನ್‌ಹೇಗನ್‌ ಸ್ಕ್ವೇರ್‌ನಲ್ಲಿ ವ್ಯಕ್ತಿಯೊಬ್ಬ ಪ್ರಧಾನಿ ಅವರನ್ನು ಬಲವಾಗಿ ತಳ್ಳಿದ್ದನು. ಹಲ್ಲೆಗೈದ 39 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!