ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಂಜೆ 7:15ಕ್ಕೆ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ (Narendra Modi) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಹೊತ್ತಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ.ಪಿ ನಡ್ಡಾ ರಾಜೀನಾಮೆ ನೀಡಿದ್ದಾರೆ.
ಮೋದಿ ಕ್ಯಾಬಿನೆಟ್‌ನಲ್ಲಿ ಜೆಪಿ ನಡ್ಡಾಗೆ ಸಚಿವ ಸ್ಥಾನ ನೀಡಲಾಗುತ್ತಿದ್ದು, ಹೀಗಾಗಿ ಜೆಪಿ ನಡ್ಡಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮೋದಿ 3ನೇ ಅವಧಿಯ ಸರ್ಕಾರದಲ್ಲಿ ಜೆಪಿ ನಡ್ಡಾಗೆ ಕೇಂದ್ರ ಸಚಿವ ಸ್ಥಾನ ನೀಡಲಾಗುತ್ತಿದೆ. ಇದರ ಹಿನ್ನಲೆಯಲ್ಲಿ ಜೆಪಿ ನಡ್ಡಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಾರಿಯ ಮೋದಿ ಸಂಪುಟದಲ್ಲಿ ಹಿಮಾಚಲ ಪ್ರದೇಶದ ನಾಯಕ ಅನುರಾಗ್ ಠಾಕೂರ್‌ಗೆ ಸ್ಥಾನ ನೀಡಿಲ್ಲ. ಅನುರಾಗ್ ಠಾಕೂರ್‌ಗೆ ಬಿಜೆಪಿ ಪಕ್ಷದಲ್ಲಿ ಮಹತ್ವದ ಜವಾಬ್ದಾರಿ ನೀಡುವ ಸಾಧ್ಯತೆ ಇದೆ. ಅನುರಾಗ್ ಠಾಕೂರ್ ಬದಲು ಹಿಮಾಚಲ ಪ್ರದೇಶದ ಮತ್ತೊಬ್ಬ ಪ್ರಮುಖ ನಾಯಕ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಯಶಸ್ಸು ತಂದುಕೊಟ್ಟಿರುವ ಜೆಪಿ ನಡ್ಡಾಗೆ ಮಂತ್ರಿಗಿರಿ ನೀಡಲು ಬಿಜೆಪಿ ಮುಂದಾಗಿದೆ.
ಇದೀಗ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಯಾರನ್ನು ನೇಮಕ ಮಾಡುತ್ತಾರೆ ಎಂಬುದೇ ತೀವ್ರ ಕುತೂಹಲ ಮೂಡಿಸಿದೆ.
ಗುಜರಾತ್‌ನಿಂದ ರಾಜ್ಯಸಭಾ ಸದಸ್ಯರಾಗಿರುವ ಜೆಪಿ ನಡ್ಡಾ, 2014 ಮೋದಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು. ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು.