ಹೊಸದಿಗಂತ ಡಿಜಿಟಲ್ ಡೆಸ್ಕ್:
ನರೇಂದ್ರ ಮೋದಿ ಅವರ ನೇತೃತ್ವದ NDA ಸರಕಾರದಲ್ಲಿ ಸಂಪುಟ ದರ್ಜೆ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿದೆ. ಅಧಿಕಾರ ಗೌಪ್ಯತೆಯ ಪ್ರತಿಜ್ಞೆ ಭೋಧಿಸಿದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರಿಗೆ ಗೌರವಪೂರ್ವಕ ಧನ್ಯವಾದಗಳು ಎಂದು ನೂತನ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಎಕ್ಸ್ನಲ್ಲಿ ಬರೆದುಕೊಂಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ದೇಶ ಸೇವೆಗೆ ಅವಕಾಶ ಕಲ್ಪಿಸಿ ಈ ಅಮೃತಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭೆ ಕ್ಷೇತ್ರದ ಮಹಾಜನತೆಗೆ, ಸಮಸ್ತ ಕನ್ನಡಿಗರಿಗೆ ಹಾಗೂ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಎಲ್ಲಾ ಕಾರ್ಯಕರ್ತ ಬಂಧುಗಳಿಗೆ ತುಂಬು ಹೃದಯದ ಕೃತಜ್ಞತೆಗಳು ಎಂದು ತಿಳಿಸಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಇಂದು(ಭಾನುವಾರ) ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇವರ ಹೆಸರಿನಲ್ಲಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದ್ದಾರೆ.