ಕೇಂದ್ರ ಸಚಿವರಾಗಿ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ಬಳಿಕ ಕೇಂದ್ರ ಸಚಿವರಾಗಿ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕಳೆದ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದ ಶೋಭಾ ಕರಂದ್ಲಾಜೆ ಈ ಬಾರಿಯೂ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯದಿಂದ ಹೆಚ್.ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!