ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸ್ಲ್ಯಾಬ್ ಮತ್ತು ಪ್ಯಾರಪೆಟ್‌ನ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಇಬ್ಬರು ವ್ಯಕ್ತಿ ಮತ್ತು 10 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ವಿಕ್ರೋಲಿ ಪಶ್ಚಿಮದಲ್ಲಿರುವ ಕೈಲಾಸ್ ಬ್ಯುಸಿನೆಸ್ ಪಾರ್ಕ್‌ನಲ್ಲಿ ಭಾನುವಾರ ಈ ಘಟನೆ ನಡೆದಿದೆ ಎಂದು ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಅಧಿಕಾರಿಗಳ ಪ್ರಕಾರ, ಘಟನಾ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪ್ಯಾರಪೆಟ್ (ಕಬ್ಬಿಣದ ತೊಲೆ) ಮತ್ತು ಸ್ಲ್ಯಾಬ್‌ನ ಕೆಲವು ಭಾಗಗಳು ಬಿದ್ದಿದ್ದು, ನಿರ್ಮಾಣ ಹಂತದಲ್ಲಿರುವ ಕಟ್ಟಡದ ಕೆಲವು ಭಾಗಗಳು ಅನಿಶ್ಚಿತವಾಗಿ ನೇತಾಡುತ್ತಿದ್ದು ಇದನ್ನು ತೆಗೆದುಹಾಕಿದ್ದಾರೆ ಎಂದು ತಿಳಿಸಿದ್ದಾರೆ.