ಬೆಳ್ಳಾರೆ ಎಪಿಎಂಸಿ ಬಳಿ ಮಹಿಳೆಯ ಮೃತದೇಹ ಪತ್ತೆ: ಕಲ್ಲಿನಿಂದ ಜಜ್ಜಿ ಕೊಲೆ?

ಹೊಸದಿಗಂತ, ಪುತ್ತೂರು:

ಸುಳ್ಯ ತಾಲೂಕಿನ ಬೆಳ್ಳಾರೆಯ ಎಪಿಎಂಸಿ ಬಳಿ ಮಹಿಳೆಯೊಬ್ಬರ ಶವವೊಂದು ಪತ್ತೆಯಾಗಿದೆ.

ಮೇಲ್ನೋಟಕ್ಕೆ ಕಲ್ಲು ಎತ್ತಿ ಹಾಕಿ ಆಕೆಯನ್ನು ಯಾರಾದರೂ ಕೊಲೆ ಮಾಡಿರಬಹುದೇ ಅನ್ನುವ ಸಂಶಯ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಯಾವುದೇ ಖಚಿತ ಮಾಹಿತಿ ದೊರಕಿಲ್ಲ.

ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಮೃತ ಮಹಿಳೆಯನ್ನು ನಳಿನಿ ಎಂದು ಗುರುತಿಸಲಾಗಿದೆ. ಆಕೆ ಕಲ್ಲೋಣಿಯವರು ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!