ಸಚಿವ ಸ್ಥಾನ ಬೇಡ ಹೇಳಿದ್ರಾ ಸುರೇಶ್​ ಗೋಪಿ? ಈ ಕುರಿತು ನೂತನ ಸಂಸದ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ತ್ರಿಶೂರ್​​ ಸಂಸದ, ಸಿನಿಮಾ ನಟ ಸುರೇಶ್​ ಗೋಪಿ ಮೋದಿ 3.0 ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಒಂದೇ ಗಂಟೆಯೊಳಗೆ ನನಗೆ ಕೇಂದ್ರದಲ್ಲಿ ಸಚಿವ ಸ್ಥಾನದ ಜವಾಬ್ದಾರಿ ಬೇಡ, ನಾನು ತ್ರಿಶ್ಯೂರ್​ ಸಂಸದನಾಗಿಯೇ ಇರುತ್ತೇನೆ. ಅದಕ್ಕಿಂತಲೂ ಮಿಗಿಲಾಗಿ ನಾನು ಸಿನಿಮಾಗಳನ್ನು ಒಪ್ಪಿಕೊಂಡಿದ್ದು ಅದನ್ನು ಮುಗಿಸಬೇಕಾಗಿದೆ ಎಂದು ಹೇಳಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಆದ್ರೆ ಇದೀಗ ನನ್ನ ಬಗ್ಗೆ ಕೆಲ ಮಾಧ್ಯಮಗಳಲ್ಲಿ ತಪ್ಪು ವರದಿ ಬರುತ್ತಿದೆ ಎಂದು ಸುರೇಶ್‌ ಗೋಪಿ ಹೇಳಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು, ನಾನು ಕೌನ್ಸಿಲ್‌ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದೆ. ಇದು ತಪ್ಪು. ಪಿಎಂ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಾವು ಕೇರಳದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಬದ್ಧರಾಗಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

https://x.com/TheSureshGopi/status/1800096601043800482?ref_src=twsrc%5Etfw%7Ctwcamp%5Etweetembed%7Ctwterm%5E1800096601043800482%7Ctwgr%5Eaa9c75f64efafed854bf68e4d4b7695bf75bc5dd%7Ctwcon%5Es1_&ref_url=https%3A%2F%2Fpublictv.in%2Fa-few-media-platforms-are-spreading-the-incorrect-news-that-i-am-going-to-resign-from-the-council-of-ministers-suresh-gopi%2F

ಸುರೇಶ್‌ ಗೋಪಿ ಅವರು ಭಾನುವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಇಂದು ನನಗೆ ಮಂತ್ರಿ ಸ್ಥಾನ ಬೇಡ ಎಂದು ಹೇಳಿರುವುದಾಗಿ ವರದಿಯಾಗಿತ್ತು.

ತಾನು ಸಚಿವ ಸ್ಥಾನ ಹುದ್ದೆಯಿಂದ ಮುಕ್ತರಾಗಲು ಮತ್ತು ತ್ರಿಶೂರ್ ಜನರಿಗಾಗಿ ಸಂಸದರಾಗಿ ಕೆಲಸ ಮಾಡಲು ಬಯಸುವೆ . ಸಂಸದನಾಗಿ ಕೆಲಸ ಮಾಡುವುದು ನನ್ನ ಗುರಿ. ನಾನು ಏನನ್ನೂ ಕೇಳಲಿಲ್ಲ. ನನಗೆ ಈ ಹುದ್ದೆ ಅಗತ್ಯವಿಲ್ಲ ಎಂದು ನಾನು ಹೇಳಿದ್ದೆ. ನಾನು ಶೀಘ್ರದಲ್ಲೇ ಹುದ್ದೆಯಿಂದ ಮುಕ್ತನಾಗುತ್ತೇನೆ ಎಂದು ನಾನು ಭಾವಿಸುತ್ತೇನೆ. ತ್ರಿಶೂರ್ ಮತದಾರರಿಗೆ ಯಾವುದೇ ಸಮಸ್ಯೆ ಇಲ್ಲ. ಅವರಿಗೆ ಅದು ತಿಳಿದಿದೆ ಮತ್ತು ಸಂಸದನಾಗಿ ನಾನು ಅವರಿಗಾಗಿ ಕಾರ್ಯನಿರ್ವಹಿಸುತ್ತೇನೆ. ನಾನು ನನ್ನ ಚಲನಚಿತ್ರಗಳನ್ನು ಮುಗಿಸಬೇಕು ಎಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ದೆಹಲಿಯಲ್ಲಿ ಮಾಧ್ಯಮಗಳ ಮುಂದೆ ಸುರೇಶ್ ಗೋಪಿ ಹೇಳಿರುವುದಾಗಿ ವರದಿಯಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!