ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾದ ವರುಣಾದಲ್ಲಿ ಕೆರೆಗಳಿಗೆ ನೀರು ತುಂಬಿಸುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹನುಮನಪುರದಲ್ಲಿ ಇಂದು ನಡೆದ ಜನಸಂಪರ್ಕ ಸಭೆಯಲ್ಲಿ ರೈತರು ತಮ್ಮ ಕೆರೆಗಳಿಗೆ ನೀರು ಬರುತ್ತಿಲ್ಲವೆಂದು ದೂರಿದರು. ಇದರಿಂದ ಗರಂ ಆದ ಯತೀಂದ್ರ ಅವರು, ಸ್ಥಳದಲ್ಲೇ ಅಧಿಕಾರಿಗೆ ಫೋನ್ ಮಾಡಿ, “ಮುಖ್ಯಮಂತ್ರಿಗಳ ಕ್ಷೇತ್ರದಲ್ಲೇ ಇಂತಹ ನಿರ್ಲಕ್ಷ್ಯ ವಹಿಸಿದರೆ ಹೇಗೆ? ನಾವು ಜನಸಂಪರ್ಕ ಸಭೆ ಮಾಡುತ್ತಿರುವುದು ಸುಮ್ಮನೆನಾ?” ಎಂದು ತರಾಟೆಗೆ ತೆಗೆದುಕೊಂಡರು.
ಅಲ್ಲದೆ, ಬೇಜವಾಬ್ದಾರಿ ತೋರಿದ ಅಧಿಕಾರಿಯ ವಿರುದ್ಧ ಕೂಡಲೇ ಕಠಿಣ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

