ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ಇದೀಗ ತಮ್ಮ ಮೊದಲ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದು, ನಾನು ಕೇವಲ ಬೆದರಿಸಲು ಹೇಳಿದ್ದೆ ಎಂದು ಹೇಳಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ರವಾನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 10 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ನಟ ದರ್ಶನ್ ಅವರು ರೇಣುಕಾಸ್ವಾಮಿಗೆ ಕೊಲೆ ಮಾಡುವಂತೆ ಹೇಳಿಲ್ಲ, ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ನಟ ದರ್ಶನ್ ಅವರನ್ನು ಮೈಸೂರಿನ ಹೋಟೆಲ್‌ನಲ್ಲಿ ಬಂಧಿಸಿ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ನಂತರ ಬೆಂಗಳೂರಿಗೆ ಕರೆದೊಯ್ದಿದ್ದಾರೆ.