ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಕೊಲೆ ಆರೋಪದಲ್ಲಿ ಪೊಲೀಸರ ವಶದಲ್ಲಿದ್ದಾರೆ. ಈ ಮಧ್ಯೆ ದರ್ಶನ್ಗೆ ಮರಣದಂಡನೆ ಆಗಬಹುದು ಎನ್ನುವ ಟ್ವೀಟ್ಗಳು ಹರಿದಾಡಿದ್ದು, ನಟಿ ರಮ್ಯಾ ಅದನ್ನು ರಿಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಬಾಕ್ಸ್ ಆಫೀಸ್ ಹೆಸರಿನ ಟ್ವಿಟ್ಟರ್ ಖಾತೆಯಿಂದ ‘ದರ್ಶನ್ಗೆ ಸೆಕ್ಷನ್ 302ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಅಥವಾ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತದೆ. ಒಂದೊಮ್ಮೆ ಈ ಪ್ರಕರಣದಲ್ಲಿ ದರ್ಶನ್ಗೆ ಶಿಕ್ಷೆ ಆಗದಿದ್ದಲ್ಲಿ ಹಣದ ಪ್ರಭಾವ ಕೆಲಸ ಮಾಡಿದೆ ಎಂದರ್ಥ ಹಾಗೂ ಭಾರತೀಯ ಕಾನೂನು ವ್ಯವಸ್ಥೆ ಎಷ್ಟು ದುರ್ಬಲವಾಗಿದೆ ಎಂದು ತೋರಿದಂತಾಗುತ್ತದೆ. ಸಂತ್ರಸ್ತರಿಗೆ ಸಿಗಬೇಕಾದ ನ್ಯಾಯ ಸಿಗುತ್ತದೆ ಎಂದು ಆಶಿಸುತ್ತೇವೆ’ ಎಂದು ಟ್ವೀಟ್ ಮಾಡಲಾಗಿದೆ. ಈ ಟ್ವೀಟ್ ಅನ್ನು ನಟಿ ರಮ್ಯಾ ರೀಟ್ವೀಟ್ ಮಾಡಿದ್ದಾರೆ.
Under Section 302, Actor #Darshan is most likely to either get life imprisonment or a sentence
Any other outcome would be a case of money influence & mockery of Indian Law System. Hope the victim gets the justice he deserves#DarshanThoogudeepa #DBoss @dasadarshan pic.twitter.com/O0biujLp1B
— Karnataka Box Office | ಕರ್ನಾಟಕ ಬಾಕ್ಸ್ ಆಫೀಸ್ (@Karnatakaa_BO) June 11, 2024