ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರ ತನಿಖೆ ಚುರುಕಾಗಿದ್ದು, ಇದೀಗ ಮತ್ತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ನಟ ದರ್ಶನ್ ಅವರನ್ನು ಬಂಧಿಸಿದ ಬಳಿಕ ಮತ್ತಷ್ಟು ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿರುವ ಪೊಲೀಸರು ಮತ್ತಷ್ಟು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ರೇಣುಕಾಸ್ವಾಮಿ ಕಿಡ್ನ್ಯಾಪ್ ಹಾಗೂ ಕೊಲೆ ಮಾಡಿದ ಈ ಕೇಸ್ನಲ್ಲಿ ನಟ ದರ್ಶನ್ ಸೇರಿ ಒಟ್ಟು 13 ಮಂದಿಯನ್ನ ಬಂಧನ ಮಾಡಲಾಗಿದೆ.