ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಈ ವೇಳೆ ರೇಣುಕಾಸ್ವಾಮಿ ದೇಹದ 15 ಭಾಗಗಳಲ್ಲಿ ಹಲ್ಲೆ ಆಗಿರುವ ಗುರುತುಗಳಿವೆ.
ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಕಾರಣಕ್ಕೆ ನಟ ದರ್ಶನ್ ಅಂಡ್ ಟೀಂ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನ ಕಿಡ್ನ್ಯಾಪ್ ಮಾಡಿ, ಹಲ್ಲೆ ನಡೆಸಿ, ಭೀಕರವಾಗಿ ಹತ್ಯೆ ಮಾಡಿದ್ದರು. ಪ್ರಕರಣ ಬೆಳಕಿಗೆ ಬಂದ ಬಳಿಕ ನಟ ದರ್ಶನ್ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ .
ಇದೀಗ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆಯ ವರದಿಯ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ರೇಣುಕಾಸ್ವಾಮಿ ದೇಹದ ಮೇಲೆ 15 ಕಡೆಗಳಲ್ಲಿ ಗಾಯದ ಗುರುತು ಪತ್ತೆಯಾಗಿರೋದಾಗಿ ಮಾಹಿತಿ ನೀಡಿದ್ದಾರೆ.
ರೇಣುಕಾಸ್ವಾಮಿ ಅವರ ಮೂಗು, ಕಾಲು, ತಲೆ, ಬೆನ್ನು, ದವಡೆ ಸೇರಿದಂತೆ 15 ಕಡೆಯಲ್ಲಿ ಬಲವಾದ ವಸ್ತುವಿನಿಂದ, ಕಟ್ಟಿಗೆಯಿಂದ ಹಲ್ಲೆ ಮಾಡಿರೋದಾಗಿ ಪೋಸ್ಟ್ ಮಾರ್ಟಂ ಮಾಡಿದಂತ ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.