ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ನಾಗರಿಕರ ಒತ್ತಾಯದಂತೆ ಬಿಬಿಎಂಪಿ (BBMP) ಪಾರ್ಕ್ ತೆರೆಯುವ ಹಾಗೂ ಮುಚ್ಚುವ ಅವಧಿಯನ್ನು ವಿಸ್ತರಣೆ ಮಾಡಿದೆ. ಬೆಳಿಗ್ಗೆ 5 ರಿಂದ ರಾತ್ರಿ 10ಗಂಟೆಯ ವರೆಗೆ ಪಾರ್ಕ್‍ಗಳನ್ನು ತೆರೆಯಲು ನಿರ್ಧಾರ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಮೊದಲು ಬೆಳಗ್ಗೆ 5 ರಿಂದ ಬೆಳಗ್ಗೆ 10ರ ತನಕ ಪಾರ್ಕ್‍ಗಳು ತೆರೆದಿರುತ್ತಿತ್ತು. ಬಳಿಕ ಮಧ್ಯಾಹ್ನ 1:30ರಿಂದ ರಾತ್ರಿ 8ರ ತನಕ ಪಾರ್ಕ್‍ಗಳನ್ನು ತೆರೆಯಲು ಅವಕಾಶ ಇತ್ತು. ಈಗ ನಾಗರಿಕರ ಒತ್ತಾಯದ ಮೇರೆಗೆ ಪಾರ್ಕ್ ತೆರೆಯುವ ಸಮಯ ಹೆಚ್ಚಳ ಮಾಡಿದ್ದೇವೆ. ಪಾರ್ಕ್‍ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಇರುತ್ತೆ, ಎಲ್ಲಾ ರೀತಿಯ ಸುರಕ್ಷಿತ ಕ್ರಮ ಕೈಗೊಳ್ಳುತ್ತೇವೆ. ಆದರೆ ಲಾಲ್ ಬಾಗ್, ಕಬ್ಬನ್ ಪಾರ್ಕ್ ಸೇರಿದಂತೆ ತೋಟಗಾರಿಕೆ ವ್ಯಾಪ್ತಿಯಲ್ಲಿ ಇರುವ ಪಾರ್ಕ್‍ಗಳಿಗೆ ಈ ಅವಧಿ ವಿಸ್ತರಣೆ ಅನ್ವಯ ಆಗುವುದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.