ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕರು, ವಿದ್ಯಾರ್ಥಿಗಳನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಜನವರಿ 9 ರಂದು ಹಿಂದಿ ಪರೀಕ್ಷೆ ಇತ್ತು. ಆದರೆ ಜನವರಿ 8 ರಂದು ನಿರಂಜನ್ ಶೆಟ್ಟಿ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಪದವಿ ಪೂರ್ವ ಇಲಾಖೆಯ ಜಂಟಿ ನಿರ್ದೇಶಕ ರಾಜು ಅವರು ನೀರಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ವಿಭಾಗದ ಸೈಬರ್ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ತನಿಖೆಗೆ ಇಳಿದ ಪೊಲೀಸರು ಹೆಡ್ ಮಾಸ್ಟರ್‌ಗಳು, ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಸೇರಿ 8 ಮಂದಿಯನ್ನು ಬಂಧಿಸಿದ್ದಾರೆ. ತುಮಕೂರು, ರಾಮನಗರ, ಕಲಬುರಗಿ ಜಿಲ್ಲೆಯ ಹೆಡ್ ಮಾಸ್ಟರ್ ಹಾಗೂ ಶಿಕ್ಷಕರ ಬಂಧನವಾಗಿದೆ.

