Monday, January 12, 2026

ಈ ನಗರದಲ್ಲಿ ಜನವರಿ 15ರವರೆಗೆ ಶಾಲೆಗಳಿಗೆ ರಜೆ ಘೋಷಣೆ, ಕಾರಣ ಎಲ್ಲರಿಗೂ ಗೊತ್ತು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರ ಭಾರತದಲ್ಲಿ ದಿನದಿಂದ ದಿನಕ್ಕೆ ಮಂಜು ಮತ್ತು ಶೀತಗಾಳಿ ಪ್ರಮಾಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಗೌತಮ ಬುದ್ಧ ನಗರದ ಜಿಲ್ಲಾಡಳಿತವು ಭಾನುವಾರ ಮಹತ್ವದ ಘೋಷಣೆ ಹೊರಡಿಸಿದೆ. ಜಿಲ್ಲೆಯ ಎಲ್ಲಾ ಪಠ್ಯಕ್ರಮಗಳು ನರ್ಸರಿಯಿಂದ 8ನೇ ತರಗತಿಯವರೆಗಿನ ಎಲ್ಲಾ ಶಾಲೆಗಳಿಗೆ ಜನವರಿ 15ರವರೆಗೆ ರಜೆ ಘೋಷಿಸಲಾಗಿದೆ.

ಇದಕ್ಕೂ ಮೊದಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ನೇತೃತ್ವದಲ್ಲಿ ಉತ್ತರ ಪ್ರದೇಶದ ಎಲ್ಲಾ ಶಾಲೆಗಳನ್ನು ಜನವರಿ 5 ರವರೆಗೆ ರಜೆ ಘೋಷಿಸಲಾಗಿತ್ತು. ಭಾರತೀಯ ಹವಾಮಾನ ಇಲಾಖೆಯ ರಾಜ್ಯದ 40 ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿಯ ಮುನ್ಸೂಚನೆ ನೀಡಿ ‘ಆರೆಂಜ್ ಅಲರ್ಟ್’ ಘೋಷಿಸಿದ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. 

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!