ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ, ದರ್ಶನ್ ಸೇರಿ 13 ಮಂದಿ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದ. ಇದನ್ನು ದರ್ಶನ್ ಸಹಿಸಿಲ್ಲ ಎನ್ನಲಾಗಿದೆ.
ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪವಿತ್ರಾ ಗೌಡ ಕೈಗೆ ಕೋಳ ಬಿದ್ದ ಮೇಲೆ ಜ್ಞಾನೋದಯವಾಗಿದ್ದು, ಪೊಲೀಸರ ಮುಂದೆ ಪವಿತ್ರಾ ಗೌಡ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ರೇಣುಕಾಸ್ವಾಮಿ ಮೆಸೇಜ್ ಬಗ್ಗೆ ದರ್ಶನ್ ಗೆ ಹೇಳಿ ತಪ್ಪು ಮಾಡಿದೆ ಎಂದು ವಿಚಾರಣೆ ವೇಳೆ ಪೊಲೀಸರ ಮುಂದೆ ಪವಿತ್ರಗೌಡ ಅಳಲು ತೋಡಿಕೊಂಡಿದ್ದಾರೆ. ಕೊಲೆಯಾದ ರೇಣುಕಾಸ್ವಾಮಿ ಮೆಸೇಜ್ ಬಗ್ಗೆ ಹೇಳಿ ಘನಘೋರ ತಪ್ಪು ಮಾಡಿದೆ. ಅಶ್ಲೀಲ ಮೆಸೇಜ್‍ಗಳನ್ನು ದರ್ಶನ್‍ಗೆ ತೋರಿಸಿ ಹೇಳಬಾರದಿತ್ತು. ಬದಲಾಗಿ ನಾನೇ ಈ ಬಗ್ಗೆ ಪೊಲೀಸರಿಗೆ ದೂರು ಕೊಡಬಹುದಿತ್ತು. ಪೊಲೀಸರಿಗೆ ದೂರು ಕೊಟ್ಟಿದ್ರೆ ಕಾನೂನು ಕ್ರಮ ಆಗುತ್ತಿತ್ತು. ಅದನ್ನು ಬಿಟ್ಟು ಪ್ರತಿಯೊಂದು ಮೆಸೇಜ್ ತೋರಿಸಿ ಹೇಳಿದ್ದೆ ತಪ್ಪಾಯ್ತು. ಇದು ಕೊಲೆಯಾಗುವ ಹಂತಕ್ಕೆ ಹೋಗುತ್ತೆ ಅಂತ ಅಂದುಕೊಂಡಿರಲಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.