ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಮತ್ತು ಸಚಿವರಾಗಿ ಪವನ್ ಕಲ್ಯಾಣ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ ಸಿಎಂ ಆಗಿದ್ದಾರೆ. ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಈ ಪ್ರಮಾಣ ವಚನ ಬೋಧಿಸಿದರು. ಒಟ್ಟು 23 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ನಟ ರಜನಿಕಾಂತ್, ಪವನ್ ಕಲ್ಯಾಣ್ ಅವರ ಸಹೋದರ ಚಿರಂಜೀವಿ ಮತ್ತು ಇತರ ಚಲನಚಿತ್ರ ತಾರೆಯರು ಮತ್ತು ಎನ್ಡಿಎ ನಾಯಕರು ಭಾಗವಹಿಸಿದ್ದರು.