ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಧನುಷ್ ಅಭಿಮಾನಿಗಳಿಗೆ ಶುಭ ಸುದ್ದಿ ಸಿಕ್ಕಿದೆ. ಧನುಷ್ ನಟಿಸಿ, ನಿರ್ದೇಶನ ಮಾಡುತ್ತಿರುವ ‘ರಾಯನ್’ ಚಿತ್ರದ ಬಿಡುಗಡೆ ದಿನಾಂಕವನ್ನು ಇದೀಗ ಫಿಕ್ಸ್ ಮಾಡಲಾಗಿದೆ.
ಜುಲೈ 26 ರಂದು “ರಾಯನ್” ಚಿತ್ರ ಬಿಡುಗಡೆಯಾಗಲಿದೆ. ಚಿತ್ರತಂಡ ಈ ಬಗ್ಗೆ ವರದಿ ಮಾಡಿದೆ. ಎರಡನೇ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಧನುಷ್, ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಉಂಟುಮಾಡಿದ್ದಾರೆ.
ಬಿಡುಗಡೆಯಾದ ‘ರಾಯನ್’ ಚಿತ್ರದ ಪೋಸ್ಟರ್‌ನಲ್ಲಿ ಧನುಷ್ ಖಡಕ್ ಲುಕ್ ಕೊಟ್ಟಿದ್ದಾರೆ. ಇನ್ನೂ ಈ ಚಿತ್ರದಲ್ಲಿ ಎಸ್ ಜೆ ಸೂರ್ಯ, ಸಂದೀಪ್ ಕಿಶನ್, ಅಪರ್ಣಾ ಬಾಲಮುರಳಿ, ವರಲಕ್ಷ್ಮಿ ಶರತ್‌ಕುಮಾರ್, ಪ್ರಕಾಶ್ ರಾಜ್ ನಟಿಸಿದ್ದಾರೆ. ನಿತ್ಯಾ ಮೆನನ್ ಕೂಡ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.