ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವಲಿ ಮೂಲದ ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಮಾಹಿತಿ ಪಡೆದ ಅಗ್ನಿಶಾಮಕ ದಳದವರು ಕೂಡಲೇ ಕಾರ್ಯಪ್ರವೃತ್ತರಾಗಿ ಹಲವು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದರು.
ಅಗ್ನಿಶಾಮಕ ದಳದ ಅಧಿಕಾರಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದು, ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.