ಹೊಸದಿಗಂತ ವರದಿ ಕಲಬುರಗಿ:
ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 11:40ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಜಿಲ್ಲೆಯ ಯಡ್ರಾಮಿ ಮತ್ತು ಸೇಡಂ ಸೇರಿದಂತೆ ಒಟ್ಟು 1595.91 ಕೋಟಿ ಮೊತ್ತದ 467 ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.
ಇದನ್ನೂ ಓದಿ: ಈ ನಗರದಲ್ಲಿ ಜನವರಿ 15ರವರೆಗೆ ಶಾಲೆಗಳಿಗೆ ರಜೆ ಘೋಷಣೆ, ಕಾರಣ ಎಲ್ಲರಿಗೂ ಗೊತ್ತು!
ಜೇವರ್ಗಿ ಮತಕ್ಷೇತ್ರದ ಯಡ್ರಾಮಿಯಲ್ಲಿ 867.49 ಕೋಟಿ ವೆಚ್ಚದ 83 ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ 38.37 ಕೋಟಿ ವೆಚ್ಚದ 17 ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ನಂತರ ಸೇಡಂನಲ್ಲಿ 579.68 ಕೋಟಿ ವೆಚ್ಚದ 292 ಯೋಜನೆಗಳಿಗೆ ಅಡಿಗಲ್ಲು ಹಾಗೂ 110.35 ಕೋಟಿ ವೆಚ್ಚದ 76 ಕಾಮಗಾರಿಗಳ ಲೋಕಾರ್ಪಣೆ ಮಾಡಲಿದ್ದಾರೆ

