ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣನನ್ನು ಜೂ.18 ರವರೆಗೆ ಎಸ್ ಐ ಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಎಸ್ ಐ ಟಿ ವಶಕ್ಕೆ ನೀಡುವಂತೆ ಎಸ್ ಐ ಟಿ ಅಧಿಕಾರಿಗಳು ಮನವಿ ಮಾಡಿದ ಹಿನ್ನೆಲೆ ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಬಾಡಿ ವಾರೆಂಟ್ ಜಾರಿಗೊಳಿಸಿದೆ.ಈ ಹಿನ್ನೆಲೆ ಜೂ.18 ರವರೆಗೆ ಪ್ರಜ್ವಲ್ ರೇವಣ್ಣನನ್ನು ಎಸ್ ಐ ಟಿ ಕಸ್ಟಡಿಗೆ ನೀಡಲು ಸೂಚಿಸಿದೆ.
ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಪ್ರಜ್ವಲ್ ರೇವಣ್ಣನನ್ನು ಬಾಡಿ ವಾರೆಂಟ್ ಪಡೆದು, ಎಸ್‌ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆಯಲು ಸಿದ್ಧತೆ ನಡೆಸುತ್ತಿದ್ದಾರೆ.
ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆ ಕಳೆದ ವಾರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪ್ರಜ್ವಲ್ ಅವರಿಗೆ ಕಾರಾಗೃಹದ ಅಧಿಕಾರಿಗಳು ವಿಶೇಷ ಭದ್ರತಾ ವಿಭಾಗದ ಸೆಲ್ ನಲ್ಲಿ ಇರಿಸಿ ಅವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 5664 ನೀಡಿದ್ದರು.