ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುನಿರೀಕ್ಷಿತ ಪುಷ್ಪ-2 ಸಿನಿಮಾ ರಿಲೀಸ್ ದಿನಾಂಕ ಬದಲಾಗಿದೆ. ಇದ್ದಕ್ಕಿದ್ದಂತೆಯೇ ಡೇಟ್ ಬದಲಾವಣೆ ಆಗಿರುವ ಕಾರಣ ಏನು ಎಂದು ಅಭಿಮಾನಿಗಳು ಆಶ್ಚರ್ಯಪಟ್ಟಿದ್ದಾರೆ.
ಆಗಸ್ಟ್ 15ರಂದು ಸಿನಿಮಾ ರಿಲೀಸ್ ಮಾಡೋಕೆ ಸಾಧ್ಯವಾಗುತ್ತಿಲ್ಲ ಎಂದು ವರದಿ ಆಗಿದೆ, ಇದಕ್ಕೆ ಕಾರಣ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಂತೆ. ಆಗಸ್ಟ್ 15ರಂದು ಯಾವುದೇ ಬಿಗ್ ಸಿನಿಮಾ ರಿಲೀಸ್ ಆಗುತ್ತಿಲ್ಲ. ಆದರೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಾಕಿ ಇರುವ ಕಾರಣ ಸಿನಿಮಾ ರಿಲೀಸ್ ಡೇಟ್ ಬದಲಾಗಿದೆ.
ನಿರ್ದೇಶಕ ಸುಕುಮಾರ್ ಅವರು ತರಾತುರಿಯಲ್ಲಿ ಸಿನಿಮಾ ರಿಲೀಸ್ ಮಾಡುವ ಆಲೋಚನೆಯಲ್ಲಿ ಇಲ್ಲ. ಎಲ್ಲವೂ ಅಚ್ಚುಕಟ್ಟಾಗಿ ತರಲು ಅವರು ನಿರ್ಧರಿಸಿದ್ದಾರೆ. ಹೀಗಾಗಿ, ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದೆ. ಈ ಕಾರಣದಿಂದಲೇ ‘ಪುಷ್ಪ 2’ ರಿಲೀಸ್ ದಿನಾಂಕ ಮುಂದಕ್ಕೆ ಹೋಗಲಿದೆ ಎನ್ನಲಾಗುತ್ತಿದೆ.